ಪುಟಗಳು

ಗುರುವಾರ, ಮಾರ್ಚ್ 3, 2011

ಮೂರ್ತಿಯಿಂದಲೇ ವಿಶ್ವ ಕನ್ನಡ ಸಮ್ಮೇಳನ ಉದ್ಘಾಟನೆ

ಬೆಂಗಳೂರು,: ಗಡಿನಾಡು ಬೆಳಗಾವಿಯಲ್ಲಿ ಮಾರ್ಚ್ 11ರಿಂದ ಮೂರು ದಿನಗಳ ಕಾಲ ನಡೆಯುವ ವಿಶ್ವ ಕನ್ನಡ ಸಮ್ಮೇಳನದ ಉದ್ಘಾಟಕರು ಯಾರಾಗಬೇಕು ಎಂಬ ವಿವಾದಕ್ಕೆ ತೆರೆ ಬಿದ್ದಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರೇ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಕೃಷಿ ಸಚಿವ ಉಮೇಶ್ ಕತ್ತಿ ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಇದನ್ನು ಖಚಿತಪಡಿಸಿದ್ದಾರೆ.

ಇನ್ಫಿ ಮೂರ್ತಿ ಉದ್ಘಾಕರಾಗಬೇಕು ಎಂಬ ವಿಚಾರದಲ್ಲಿ ಅಪಸ್ವರ ಕೇಳಿಬಂದಿತ್ತು. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಪೂರ್ವನಿರ್ಧಾರದಂತೆ ಐಟಿ ಕ್ಷೇತ್ರದ ದಿಗ್ಗಜ, ಅಪ್ಪಟ ಕನ್ನಡಿಗ ನಾರಾಯಣಮೂರ್ತಿಯ ಹೆಸರೇ ಅಂತಿಮ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಕತ್ತಿ ಸ್ಪಷ್ಟಪಡಿಸಿದ್ದಾರೆ. 

ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ, ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ, ಮತ್ತೊಬ್ಬ ಐಟಿ ದಿಗ್ಗಜ ಅಜೀಂ ಪ್ರೇಮ್‌ಜಿ ಆಗಮಿಸುವರು. ಸಮಾರೋಪ ಸಮಾರಂಭದಲ್ಲಿ ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ, ರೈಲ್ವೆ ಖಾತೆ ಸಚಿವ ಕೆಎಚ್ ಮುನಿಯಪ್ಪ ಪಾಲ್ಗೊಳ್ಳುವರು ಎಂದು ಅವರು ಹೇಳಿದರು. ಇದರೊಂದಿಗೆ ಬಾಲಿವುಡ್ ಬೆಡಗಿ, ಕನ್ನಡತಿ ಐಶ್ವರ್ಯ ರೈ ಸಮಾರಂಭದಲ್ಲಿ ಭಾಗವಹಿಸುವ ಲಕ್ಷಣಗಳು ಕಂಡಿಲ್ಲ.
English summary
Agriculture Minister umesh katti has clarified that Infosys Technologies chairman of board and chief mentor, N R Narayana Murthy, himself will inaugurate the Vishwa Kannada Sammelan to be held in Belgaum, as originally planned. He was reacting to reports on controversy over who will inaugurate the Sammelan.

0 ಕಾಮೆಂಟ್‌(ಗಳು):

ಕಾಮೆಂಟ್‌‌ ಪೋಸ್ಟ್‌ ಮಾಡಿ

ವಿಶ್ವ ಕನ್ನಡ ಸಮ್ಮೇಳನ ಕಾರ್ಯಕ್ರಮದ ನೇರ ಪ್ರಸಾರ........